ಮಂಗಳೂರು: ಅಯೋಧ್ಯೆಯ ರಾಮಮಂದಿರದ ಉದ್ಘಾಟನೆ, ಮಹಾಮಸ್ತಕಾಭಿಷೇಕ ಕಾರ್ಯಕ್ರಮ ಅಂಗವಾಗಿ ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ಡಿ.ವೇದವ್ಯಾಸ ಕಾಮತ್ ಅವರು ಬಜಿಲಕೇರಿಯ ಮುಖ್ಯಪ್ರಾಣ ದೇವಸ್ಥಾನದಲ್ಲಿ ಉರುಳು ಸೇವೆ ಮಾಡಿ ಹರಕೆ ಸಲ್ಲಿಸಿದರು. ನಂತರ ಮಾತನಾಡಿದ ಅವರು, ರಾಮಜನ್ಮಭೂಮಿ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪಿನ ಕೆಲವು ದಿನಗಳ ಮೊದಲು, ನಾನು ಈ ಸೆವೆಯನ್ನು ಮಾಡಲು ಪ್ರತಿಜ್ಞೆ ಮಾಡಿದ್ದೆ. ಈ ಹರಕೆಯನ್ನು ಇಂದು ಬೆಳಗ್ಗೆ 8.30ಕ್ಕೆ ಸಲ್ಲಿಸಿದ್ದೇನೆ ಎಂದರು. ಹಿಂದಿನ ಅವಧಿಯಲ್ಲಿ ಶಂಕುಸ್ಥಾಪನೆ ಮಾಡುವಾಗ ನಾನು ಶಾಸಕನಾಗಿದ್ದೆ. ರಾಮಮಂದಿರ ಉದ್ಘಾಟನೆ ಸಂದರ್ಭದಲ್ಲಿ ಎರಡನೇ ಬಾರಿಗೆ ಶಾಸಕನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ ಎಂದು ಹೇಳಿದರು.
ವಿಡಿಯೋ: ಉರುಳು ಸೇವೆ ನೆರವೇರಿಸಿದ ಶಾಸಕ ಕಾಮತ್
