Site icon newsroomkannada.com

ಉಡುಪಿ ಮರವಂತೆ ಬೀಚ್‌ ಚಿತ್ರ ಹಂಚಿಕೊಂಡ ವಿರೇಂದ್ರ ಸೆಹ್ವಾಗ್: ಕಾರಣ ಏನು ಗೊತ್ತಾ

ನವದೆಹಲಿ: ಮಾಲ್ಡೀವ್ಸ್ ಸರ್ಕಾರದ ಅಧಿಕಾರಿಗಳಿಂದ ಭಾರತ ವಿರೋಧಿ ಹೇಳಿಕೆ ವಿರುದ್ಧ ಭಾರತದ ಕ್ರಿಕೆಟ್ ಹಾಗೂ ಬಾಲಿವುಡ್ ಸ್ಟಾರ್ ಗಳು ಕಿಡಿಕಾರಿದ್ದಾರೆ. ಮಾಜಿ ಟೀಂ ಇಂಡಿಯಾ ಆರಂಭಿಕ ಆಟಗಾರ ವಿರೇಂದ್ರ ಸೆಹ್ವಾಗ್, ಭಾರತ ಮತ್ತು ಪ್ರಧಾನಿ ಮೋದಿ ವಿರುದ್ಧ ಅನಗತ್ಯ ಹೇಳಿಕೆ ಹಿನ್ನೆಲೆಯಲ್ಲಿ ಉಡುಪಿ, ಅಂಡಮಾನ್ ಬೀಚ್ ಮತ್ತಿತರ ಸುಂದರ ಬೀಚ್ ಗಳ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಉಡುಪಿಯ ಮರವಂತೆ, ಪೊಂಡಿಯ ಪ್ಯಾರಡೈಸ್, ಅಂಡಮಾನ್‌ನ ನೀಲ್ ಮತ್ತು ಹ್ಯಾವ್‌ಲಾಕ್ ಬೀಚ್ ಗಳ ಫೋಟೋಗಳನ್ನು ಹಂಚಿಕೊಂಡಿರುವ ಸೆಹ್ವಾಗ್, ದೇಶದಲ್ಲಿ ಅನ್ವೇಷಿಸದ ಹಲವಾರು ಸ್ಥಳಗಳಿದ್ದು, ಮೂಲಸೌಕರ್ಯ ಒದಗಿಸುವುದರೊಂದಿಗೆ ಅವುಗಳನ್ನು ಅಭಿವೃದ್ಧಿಪಡಿಸಬೇಕಾಗಿದೆ ಎಂದು ಒತ್ತಾಯಿಸಿದ್ದಾರೆ. ವಿರೇಂದ್ರ ಸೆಹ್ವಾಗ್ ಅವರ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್, ಇದು ತುಂಬಾ ಪ್ರಸ್ತುತವಾಗಿದೆ ಮತ್ತು ನಮ್ಮದೇ ಅತ್ಯಂತ ಉತ್ತಮವಾಗಿದೆ. ಲಕ್ಷದ್ವೀಪ ಮತ್ತು ಅಂಡಮಾನ್‌ಗಳಿಗೆ ಹೋಗಿದ್ದು, ಅವುಗಳು ಆಶ್ಚರ್ಯಕರವಾದ ಸುಂದರವಾದ ಸ್ಥಳಗಳಾಗಿವೆ. ಬೆರಗುಗೊಳಿಸುವ ಕಡಲತೀರಗಳು ಮತ್ತು ನೀರೊಳಗಿನ ಅನುಭವವು ನಂಬಲಾಗದ್ದು ಎಂದಿದ್ದಾರೆ

Exit mobile version