ಮಂಗಳೂರು: ಬ್ಯಾಂಕ್ ಖಾತೆ ಹ್ಯಾಕರ್‌ಗಳ ಸುಳಿಗೆ ಸಿಲುಕಿ ವಂಚನೆ ಆರೋಪಕ್ಕೆ ಒಳಗಾಗಿ ಸೌದಿ ಅರೇಬಿಯಾದ ರಿಯಾದ್‌ನ ಜೈಲಿನಲ್ಲಿ ಕಳೆದ 11 ತಿಂಗಳಿನಿಂದ ಬಂಧಿಯಾಗಿದ್ದ ಕಡಬ ತಾಲೂಕಿನ ಐತ್ತೂರು ಗ್ರಾಮದ ಮೂಜೂರು ನಿವಾಸಿ ಚಂದ್ರಶೇಖರ್ ಕೊನೆಗೂ ಬಂಧಮುಕ್ತನಾಗಿದ್ದು, ಸೋಮವಾರ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು ನನ್ನ ಬಿಡುಗಡೆಗೆ ಹಲವರು ಪ್ರಯತ್ನ ಮಾಡಿದ್ದಾರೆ. ಅವರಿಗೆ ಕೋಟಿ ಕೋಟಿ ಅಭಿನಂದನೆಗಳು ಎಂದು ಹೇಳಿದ್ದಾರೆ.
Video: ನನ್ನ ಬಿಡುಗಡೆಗೆ ಪ್ರಯತ್ನ ಮಾಡಿದವರಿಗೆ ಕೋಟಿ ಕೋಟಿ ಅಭಿನಂದನೆ: ಸೌದಿ ಜೈಲಿನಿಂದ ತಾಯ್ನಾಡಿಗೆ ಬಂದಿಳಿದ ಕಡಬದ ಚಂದ್ರಶೇಖರ್ ಮಾತು
