main logo

ವಿದ್ಯಾರ್ಥಿನಿಯರ ವಿಡಿಯೋ ಪ್ರಕರಣ: ತನಿಖೆಯ ದಿಕ್ಕಿನಲ್ಲಿ ಮಹತ್ತರ ಬದಲಾವಣೆ

ವಿದ್ಯಾರ್ಥಿನಿಯರ ವಿಡಿಯೋ ಪ್ರಕರಣ: ತನಿಖೆಯ ದಿಕ್ಕಿನಲ್ಲಿ ಮಹತ್ತರ ಬದಲಾವಣೆ

ಉಡುಪಿ: ಉಡುಪಿಯ ಖಾಸಗಿ ಕಾಲೇಜಿನ ಮೂವರು ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಮೊಬೈಲ್ ಕ್ಯಾಮೆರಾ ಇಟ್ಟು ಓರ್ವ ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣ ಮಾಡಿರುವುದಕ್ಕೆ ಸಂಬಂಧಿಸಿ ತನಿಖಾಧಿಕಾರಿ ನಿಖಾಧಿಕಾರಿಯಾಗಿದ್ದ ಮಲ್ಪೆ ಇನ್ಸ್​ಪೆಕ್ಟರ್​ ಮಂಜುನಾಥ್ ಗೌಡ ಅವರನ್ನು ಬದಲಾವಣೆ ಮಾಡಲಾಗಿದೆ.

ಕುಂದಾಪುರ ಡಿವೈಎಸ್​​​ಪಿ ಬೆಳ್ಳಿಯಪ್ಪ ಅವರನ್ನು ತನಿಖಾಧಿಕಾರಿಯನ್ನಾಗಿ ಉಡುಪಿ ಎಸ್​​​​​​ಪಿ ಅಕ್ಷಯ್​ ನೇಮಕ ಮಾಡಿದ್ದಾರೆ. ಆರಂಭದಿಂದ ತನಿಖೆ ನಡೆಸಿಕೊಂಡು ಬಂದಿದ್ದ ಮಲ್ಪೆ ಇನ್ಸ್​ಪೆಕ್ಟರ್ ಮಂಜುನಾಥ್ ಗೌಡರನ್ನು ಬದಲಾಯಿಸಬೇಕೆಂಬ ಒತ್ತಾಯ ಕೇಳಿಬಂದಿತ್ತು. ಅದರಂತೆಯೇ ಇದೀಗ ಬದಲಾವಣೆ ಮಾಡಿ, ಕುಂದಾಪುರ ಡಿವೈಎಸ್​​​ಪಿ ಬೆಳ್ಳಿಯಪ್ಪರಿಗೆ ತನಿಖೆ ವಹಿಸಲಾಗಿದೆ.

ಸಂತ್ರಸ್ತೆ ಹೇಳಿಕೆ ದಾಖಲು: ಸದ್ಯ ಐಜಿಪಿ ಭೇಟಿ ಹಿನ್ನೆಲೆಯಲ್ಲಿ ಉಡುಪಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಸಂತ್ರಸ್ತ ವಿದ್ಯಾರ್ಥಿನಿಯ ಹೇಳಿಕೆಯನ್ನು ಮಹಿಳಾ ಅಧಿಕಾರಿಗಳು ದಾಖಲಿಸಿಕೊಂಡಿದ್ದಾರೆ. ಸ್ಥಳದಲ್ಲಿ ಆಪರೇಟ್ ಆಗುತ್ತಿದ್ದ ಎಲ್ಲ ಮೊಬೈಲ್​ಗಳ ಕಾಲ್ ಡೀಟೇಲ್ಸ್​​ಗಳನ್ನು ಪತ್ತೆ ಹಚ್ಚಿದ್ದು, ಮೊಬೈಲ್​ಗಳನ್ನು ಎಫ್​ಎಸ್​ಎಲ್​ಗೆ ಕಳುಹಿಸಿದ್ದಾರೆ. ಜೊತೆಗೆ ಅನಗತ್ಯ ವ್ಯಕ್ತಿಗಳು ಕಾಂಪೌಂಡ್ ಆವರಣದಲ್ಲಿ ಓಡಾಟ ಆರೋಪ ಕೇಳಿಬಂದಿದ್ದು, ಕಾಲೇಜು ಆವರಣದಲ್ಲಿನ ಸಿಸಿ ಕ್ಯಾಮರಾಗಳ ಫೂಟೇಜ್​ನ್ನು ವಶಕ್ಕೆ ಪಡೆಯಲಾಗಿದೆ.

Related Articles

Leave a Reply

Your email address will not be published. Required fields are marked *

error: Content is protected !!