Site icon newsroomkannada.com

ವಿದ್ಯುತ್‌ ಲೋಡ್‌ ಶೆಡ್ಡಿಂಗ್‌ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಬೆಂಗಳೂರು: ರಾಜ್ಯ ಸರ್ಕಾರ ಸದ್ದಿಲ್ಲದೆ ವಿದ್ಯುತ್‌ ಲೋಡ್‌ ಶೆಡ್ಡಿಂಗ್‌ ಮಾಡುತ್ತಿದೆ ಎಂದು ಬಿಜೆಪಿ ಮುಖಂಡರು, ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರ ಸ್ವಾಮಿ ಆರೋಪಿಸಿದ್ದಾರೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಮಳೆ ಕಡಿಮೆಯಾಗುವುದರಿಂದ ಹಾಗೂ ಬೇಸಿಗೆ ರೀತಿಯಲ್ಲಿ ವಿದ್ಯುತ್ತಿಗೆ ಬೇಡಿಕೆ ಹೆಚ್ಚಾಗಿದೆ. ವಿದ್ಯುತ್ ಖರೀದಿ ಕುರಿತಂತೆ ಇಂದು (ಶುಕ್ರವಾರ)ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಈ ಕುರಿತು ಶುಕ್ರವಾರ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿದ್ಯುತ್ ಉತ್ಪಾದನೆ ಕಡಿಮೆಯಾಗುತ್ತಿದ್ದು, ಬೇಡಿಕೆ ಹೆಚ್ಚಾಗುತ್ತಿದೆ. ಕಳೆದ ವರ್ಷ ಇದೇ ವೇಳೆಗೆ 9000 ದಿಂದ 10000 ಮೆ.ವ್ಯಾಟ್ ಬಳಸಲಾಗುತ್ತಿತ್ತು. ಈ ಬಾರಿ ಗರಿಷ್ಠ ಬೇಡಿಕೆ 15 ಸಾವಿರದಿಂದ 16 ಸಾವಿರ ಮೆಗಾ ವಾಟ್ ಗೆ ತಲುಪಿದೆ.

ಬೇಡಿಕೆ ಇರುವುದರಿಂದ ತೊಂದರೆಯಾಗಿದೆ. ವಿದ್ಯುತ್ ನ್ನು ಹೊರಗಿನಿಂದ ಹೇಗೆ ಖರೀದಿಸುವುದು ಎಂದು ಚರ್ಚಿಸಲು ಇಂದು ಮಧ್ಯಾಹ್ನ ಸಭೆ ಕರೆಯಲಾಗಿದೆ. ವಿದ್ಯುತ್ ಉತ್ಪಾದನೆ ಮಾಡುವವರು ಸರ್ಕಾರಕ್ಕೆ ಮಾರಾಟ ಮಾಡಬೇಕು, ಬೇರೆಲ್ಲಿಯೂ ಮಾರಬಾರದೆಂದು ನಿನ್ನೆ ಅದೇಶವನ್ನೂ ಮಾಡಲಾಗಿದೆ ಎಂದು ಹೇಳಿದರು.

Exit mobile version