ಮಂಗಳೂರು: ಕರಾವಳಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಮಂಗಳೂರಿಗೆ ಬಂದಿಳಿದಿದ್ದಾರೆ. ಮಂಗಳೂರು ವಿಮಾನ ನಿಲ್ದಾನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸೌಜನ್ಯ ಪ್ರಕರಣ ಕುರಿತು ಮಹತ್ವದ ಮಾಹಿತಿ ನೀಡಿದರು.
ಏನು ಹೇಳಿದ್ರು: ಕಳೆದೊಂದು ದಶಕದ ಹಿಂದೆ ನಡೆದಿದ್ದ ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಕೋರ್ಟ್‌ನಿಂದ ಜಡ್ಜ್‌ಮೆಂಟ್ ಬಂದಿದೆ. ಈ ಬಗ್ಗೆ ನಾನು ಲಾಯರ್ ಆಗಿ ಹೇಳೋದಾದರೆ ಹೈಕೋರ್ಟ್‌ಗೆ ಅಪೀಲ್ ಹೋಗಬೇಕು. ಸೌಜನ್ಯಾ ಪ್ರಕರಣ ಕುರಿತ ಮರುತನಿಖೆಗೆ ಆಕೆಯ ತಂದೆ ತಾಯಿ ಮನವಿ ಮಾಡಿದ್ದಾರೆ. ಸಿಬಿಐ ಕೋರ್ಟ್ ಜಡ್ಜ್‌ಮೆಂಟ್ ಕಾಪಿ ನೀಡಿದ್ದಾರೆ. ಈ ಕಾಪಿಯನ್ನು ಓದಿ ಅಪೀಲ್ ಹೋಗಲು ಅವಕಾಶವಿದೆಯೇ ಎಂಬುದನ್ನು ನೋಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಉಡುಪಿ ಕಾಲೇಜು ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪೊಲೀಸರು ಸುಮೋಟೋ ಎಫ್ ಐಆರ್ ಮಾಡಿದ್ದಾರೆ, ಡಿವೈಎಸ್ಪಿ ತನಿಖೆ ಆಗುತ್ತಿದೆ. ಅದು ಮೊದಲು ನಡೆಯಲಿ, ರಾಷ್ಟ್ರೀಯ ಮಹಿಳಾ ಆಯೋಗವೇ ಅಲ್ಲಿ ಕ್ಯಾಮರಾ ಇಟ್ಟಿರಲಿಲ್ಲ ಎಂದಿದ್ದಾರೆ. ತನಿಖಾ ವರದಿ ಬರಲಿ, ಆಮೇಲೆ ಈ ಬಗ್ಗೆ ಮಾತನಾಡುವ ಎಂದರು. ಗೃಹ ಸಚಿವರ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಗೆ, ಕಾಲೇಜ್ ನಲ್ಲಿ ಇರುವ ವಿದ್ಯಾರ್ಥಿಗಳು ತಮಾಷೆ ಮಾಡಿರಬಹುದು ಎಂದು ಗೃಹ ಸಚಿವರು ಹೇಳಿರಬಹುದು. ಎಫ್‌ಐಆರ್್ರ ಆಗಿ ತನಿಖೆ ಆಗುತ್ತಿದೆ. ಡಿವೈಎಸ್ಪಿ ಮಟ್ಟದ ತನಿಗೆ ಆಗುತ್ತಿರುವವಾಗ ಎಸ್ ಐಟಿ ಪ್ರಶ್ನೆ ಉದ್ಭವಿಸಲ್ಲ ಎಂದರು. ನೈತಿಕ ಪೊಲೀಸ್ ಗಿರಿಗೆ ಅವಕಾಶ ಇಲ್ಲ: ರಾಜ್ಯದಲ್ಲಿ ನೈತಿಕ ಪೊಲೀಸ್ ಗಿರಿ ನಡೆಸುವವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಪೊಲೀಸರಿಗೆ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದರು.