Site icon newsroomkannada.com

ತ್ರಿಷಾಳನ್ನು ಬೆಡ್​ರೂಂಗೆ ಎತ್ತಿಕೊಂಡು ಹೋಗುವ ಸೀನ್ ಬೇಕಿತ್ತು ಎಂದು ವಿವಾದ ಸೃಷ್ಟಿಸಿದ ನಟ ಯಾರು?

Who was the actor who created a controversy by saying that he wanted a scene where Trisha was taken to the bedroom?

ವಿಜಯ್ ನಟನೆಯ ಇತ್ತಿಚೆಗಿನ ಸೂಪರ್ ಹಿಟ್ ಸಿನಿಮಾ ‘ಲಿಯೋ’ನಲ್ಲಿ ನಟಿಸಿದ್ದ ನಟ ಮನ್ಸೂರ್ ಅಲಿ ಖಾನ್ ಇತ್ತೀಚೆಗಿನ ತಮ್ಮ ಸಂದರ್ಶನವೊಂದರಲ್ಲಿ ‘ಲಿಯೋ’ ಸಿನಿಮಾ ಬಗ್ಗೆ ಮಾತನಾಡುತ್ತಾ, ಆ ಸಿನಿಮಾದ ನಟಿ ತ್ರಿಷಾ ಬಗ್ಗೆ ಕೀಳು ಅಭಿರುಚಿಯ ಹೇಳಿಕೆಯನ್ನು ನೀಡಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ್ದ ನಟ ಮನ್ಸೂರ್ ಅಲಿ ಖಾನ್, ‘ನಾನು ‘ಲಿಯೋ’ ಸಿನಿಮಾದಲ್ಲಿ ನಟಿಸುತ್ತಿದ್ದೆ. ಆ ಸಿನಿಮಾದ ನಾಯಕಿ ತ್ರಿಷಾ ಎಂದು ತಿಳಿದಾಗ ಸಂತೋಷವಾಯ್ತು. ನನ್ನ ಹಾಗೂ ತ್ರಿಷಾ ನಡುವೆ ಒಳ್ಳೆಯ ಬೆಡ್​ರೂಂ ಸೀನ್​ಗಳಿರುತ್ತವೆ ಎಂದು ನಿರೀಕ್ಷಿಸಿದ್ದೆ. ಆದರೆ ಅದೆಲ್ಲ ಸುಳ್ಳಾಯಿತು. ತ್ರಿಷಾಳನ್ನು ಬೆಡ್​ರೂಂಗೆ ಎತ್ತಿಕೊಂಡು ಹೋಗಿ ರೇಪ್ ಮಾಡುವ ಸೀನ್ ಇರುತ್ತದೆ ಅಂದುಕೊಂಡಿದ್ದೆ. ನಾನು ಸಿನಿಮಾಗಳಲ್ಲಿ ನಟಿಸಲು ಆರಂಭಿಸಿದಾಗ ಅಂಥಹಾ ಹಲವು ಸೀನ್​ಗಳಲ್ಲಿ ನಟಿಸಿದ್ದೇನೆ. ಸಿನಿಮಾದಲ್ಲಿ ಹಲವು ನಟಿಯರನ್ನು ರೇಪ್ ಮಾಡಿದ್ದೀನಿ. ಆದರೆ ‘ಲಿಯೋ’ ಸಿನಿಮಾನವರು ತ್ರಿಷಾರ ಮುಖವನ್ನು ಸಹ ನನಗೆ ತೋರಿಸಲಿಲ್ಲ’ ಎಂದು ಹೇಳಿದ್ದಾರೆ.

ಮನ್ಸೂರ್ ಅಲಿ ಖಾನ್ ಮಾತಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ನಟಿ ತ್ರಿಷಾ, ” ಮನ್ಸೂರ್ ಅಲಿ ಖಾನ್ ನನ್ನ ಬಗ್ಗೆ ಅಸಹ್ಯವಾಗಿ ಮಾತನಾಡಿರುವ ವೀಡಿಯೊ ಇತ್ತೀಚೆಗೆ ನನ್ನ ಗಮನಕ್ಕೆ ಬಂದಿದೆ. ಆ ನಟನ ಮಾತುಗಳನ್ನು ನಾನು ಬಲವಾಗಿ ಖಂಡಿಸುತ್ತೇನೆ. ಅಗೌರವ, ಸ್ತ್ರೀದ್ವೇಷ, ಕೆಟ್ಟ ಅಭಿರುಚಿ ಹಾಗೂ ಲೈಂಗಿಕ ಲೋಭವನ್ನು ಹೊಂದಿದೆ. ನನ್ನೊಂದಿಗೆ ನಟಿಸಲು ಅವರು ಬಯಸಬಹುದು ಆದರೆ ನಾನು ಅವರಂತಹ ಕೆಟ್ಟ ವ್ಯಕ್ತಿಯೊಂದಿಗೆ ಎಂದಿಗೂ ಪರದೆಯನ್ನು ಹಂಚಿಕೊಳ್ಳುವುದಿಲ್ಲ. ಈ ಹಿಂದೆ ಪರದೆ ಹಂಚಿಕೊಂಡಿದ್ದಕ್ಕೆ ನಾನು ಕೃತಜ್ಞಳಾಗಿದ್ದೇನೆ. ಮತ್ತು ನನ್ನ ಉಳಿದ ಚಲನಚಿತ್ರ ವೃತ್ತಿಜೀವನದಲ್ಲಿ ನಾನು ಅವರೊಟ್ಟಿಗೆ ಎಂದಿಗೂ ಪರದೆ ಹಂಚಿಕೊಳ್ಳದಂತೆ ಎಚ್ಚರವಹಿಸುತ್ತೇನೆ. ಅವರಂತಹವರು ಮನುಕುಲಕ್ಕೆ ಕೆಟ್ಟ ಹೆಸರು ತರುತ್ತಾರೆ’’ ಎಂದಿದ್ದಾರೆ.

‘ಲಿಯೋ’ ಸಿನಿಮಾದ ನಿರ್ದೇಶಕ ಲೋಕೇಶ್ ಕನಗರಾಜು ಸಹ ಮನ್ಸೂರ್ ಅಲಿ ಖಾನ್​, ನಟಿ ತ್ರಿಷಾ ಬಗ್ಗೆ ನೀಡಿರುವ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ”ನಾವೆಲ್ಲರೂ ಒಂದೇ ತಂಡದಲ್ಲಿ ಕೆಲಸ ಮಾಡಿದ್ದರಿಂದ ಮನ್ಸೂರ್ ಅಲಿ ಖಾನ್ ಅವರು ಮಾಡಿದ ಸ್ತ್ರೀದ್ವೇಷದ ಕಾಮೆಂಟ್‌ಗಳನ್ನು ಕೇಳಿ ಅಸಮಾಧಾನ ಮತ್ತು ಕೋಪಗೊಂಡಿದ್ದೇವೆ. ಮಹಿಳೆಯರು, ಸಹ ಕಲಾವಿದರು ಮತ್ತು ವೃತ್ತಿಪರರಿಗೆ ಗೌರವ ನೀಡುವುದು ಯಾವುದೇ ಉದ್ಯಮದಲ್ಲಿ ಅತ್ಯಂತ ಅವಶ್ಯಕ. ನಾನು, ಮನ್ಸೂರ್ ಅಲಿ ಖಾನ್​ರ ಈ ನಡವಳಿಕೆಯನ್ನು ಸಂಪೂರ್ಣವಾಗಿ ಖಂಡಿಸುತ್ತೇನೆಜ್’ ಎಂದಿದ್ದಾರೆ. ಇತ್ತೀಚೆಗಷ್ಟೆ ಮನ್ಸೂರ್ ಅಲಿ ಖಾನ್, ನಟಿ ತಮನ್ನಾ ಬಗ್ಗೆಯೂ ಕೀಳು ಅಭಿರುಚಿಯ ಹೇಳಿಕೆಗಳನ್ನು ನೀಡಿದ್ದರು.

Exit mobile version