ವಿಜಯನಗರ: ವಿಜಯನಗರ ತಾಲೂಕಿನ ಇಟ್ಟಿಗಿ ಗ್ರಾಮದಲ್ಲಿ ಪತಿ ತನ್ನ ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿದ ಕೊನೆಗೆ ತಾನೇ ಪೊಲೀಸ್ ಠಾಣೆಗೆ ಹೋಗಿ ಶರಣಾಗಿರುವ ಘಟನೆ ನಡೆದಿದೆ.
ಕೊಲೆಯಾದ ಡಿಂಪಲ್ (36) ಮೂಲತಃ ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ತಾಲೂಕಿನ ಮಾದಾಪುರ ಗ್ರಾಮದವರು. ಕೊಲೆ ಆರೋಪಿ ಶ್ರೀಕಾಂತ ನೆಲ್ಲುಕುದುರಿ ಗ್ರಾಮದ ಪ್ರಾಥಮಿಕ ಆರೋಗ್ಯಕೇಂದ್ರದ ಸಮುದಾಯ ಆರೋಗ್ಯಾಧಿಕಾರಿ.
ಡಿಂಪಲ್, ಶ್ರೀಕಾಂತನನ್ನ ಪ್ರೀತಿಸಿ ಮದುವೆಯಾಗಿದ್ದರು. ಡಿಂಪಲ್‌ಗೆ ಇದು 3ನೇ ಮದುವೆ, ಶ್ರೀಕಾಂತ್‌ಗೆ 2ನೇ ಮದುವೆ. ತಾಲೂಕಿನ ಇಟ್ಟಿಗಿ ಗ್ರಾಮದಲ್ಲಿ ವಾಸವಾಗಿದ್ದ ದಂಪತಿ ಪರಸ್ಪರ ಅನ್ನೋನ್ಯವಾಗಿದ್ದರು. ಎಲ್ಲವೂ ಚೆನ್ನಾಗಿಯೇ ಇತ್ತು. ಶುಕ್ರವಾರ (ನ.25) ರಾತ್ರಿ ಏಕಾಏಕಿಯಾಗಿ ಇಬ್ಬರ ನಡುವೆ ಪ್ರಾರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಹೆಂಡತಿಯನ್ನ ಕೊಲೆ ಮಾಡಿದ ನಂತರ ಶ್ರೀಕಾಂತ ಗ್ರಾಮದ ಪೊಲೀಸ್ ಠಾಣೆಗೆ ತೆರಳಿ ತಾನೇ ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿರುವ ಘಟನೆ ಸಂಭವಿಸಿದೆ.