Site icon newsroomkannada.com

ಕರಾವಳಿ ವಿದ್ಯಾರ್ಥಿಗಳ ಕೈಯಲ್ಲಿ ಕೊಡಲಿ ರೂಪದ ಪೆನ್ಸಿಲ್‌ ವಿವಾದವಾಗಿದ್ದೇಕೆ?

ಬಂಟ್ವಾಳ: ವಿವಾದಾತ್ಮಕ ಪೆನ್ಸಿಲ್ ಮಾರಾಟ ಮಾಡುವ ವ್ಯಕ್ತಿಗಳ ವಿರುದ್ದ ಕ್ರಮಕೈಗೊಳ್ಳುವಂತೆ ಪೋಷಕರು ಒತ್ತಾಯ ಮಾಡಿದ್ದಾರೆ. ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಗಡಿಯಾರ ಪ್ರಾಥಮಿಕ ಶಾಲೆಯ ಮಕ್ಕಳ ಕೈಯಲ್ಲಿ ಈ ಪೆನ್ಸಿಲ್ ಕಂಡು ಬಂದಿದ್ದು,ಪೋಷಕರು ಈ ವಿವಾದಾತ್ಮಕ ಪೆನ್ಸಿಲ್ ನ ವಿರುದ್ದ ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಸರಕಾರಿ ಶಾಲೆಗಳಿಗೆ ಬೇಟಿ ನೀಡುವ ಈ ಮಾರಾಟಗಾರರು ಮಕ್ಕಳಿಗೆ ಬೇಕಾಗುವ ಪೆನ್ಸಿಲ್ ನ ಆರ್ಡರ್ ಪಡೆದುಕೊಂಡು ಹೋಗುತ್ತಾರೆ. ಅದರ ಬೆಲೆಯನ್ನು ತಿಳಿಸುತ್ತಾರೆ. ಎರಡು ದಿನಗಳ ಬಳಿಕ ಬಂದು ಪೆನ್ಸಿಲ್ ನೀಡುತ್ತಾರೆ ಎಂದು ಪೋಷಕರು ತಿಳಿಸಿದ್ದಾರೆ. ರೂ.20 ಮುಖ ಬೆಲೆಯ ಈ ಪೆನ್ಸಿಲ್ ನೋಡಲು ಬಲು ಸುಂದರವಾಗಿದೆಯಾದರೂ, ಅದರ ಒಂದು ಭಾಗದಲ್ಲಿ ಕೊಡಲಿಯನ್ನು ಹೋಲುವ ಮತ್ತು ಶೈಲಿಯಲ್ಲಿ ಇದ್ದು, ಮಕ್ಕಳ ಕೈಗೆ ಅಥವಾ ಇತರರಿಗೆ ಗಾಯವಾಗುವ ಅವಕಾಶಗಳೇ ಹೆಚ್ಚು ಇದೆ ಎಂದು ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ.

ಇಂತಹ ವಿವಾದಾತ್ಮಕ ಮತ್ತು ಮಕ್ಕಳ ಮೇಲೆ ದುಷ್ಪರಿಣಾಮ ಬೀರುವ ವಸ್ತುಗಳ ಮಾರಾಟಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಅವಕಾಶ ನೀಡಬಾರದು ಎಂಬುದು ಪೋಷಕರು ಒತ್ತಾಯ ಮಾಡಿದ್ದಾರೆ.

Exit mobile version