Site icon newsroomkannada.com

ಮಂಗಳೂರಿನಲ್ಲಿ ಉದ್ಯೋಗಿಯಾಗಿದ್ದ ಯುವತಿ ಆತ್ಮಹತ್ಯೆ

ಮಂಗಳೂರು: ಮಂಗಳೂರಿನಲ್ಲಿ ಉದ್ಯೋಗಿಯಾಗಿದ್ದ ಯುವತಿ ತನ್ನ ಸ್ವಗೃಹದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ಕಳೆಂಜ ಗ್ರಾಮದ ಕಾಯರ್ತಡ್ಕದಲ್ಲಿ ನಡೆದಿದೆ. ಕಾಯರ್ತಡ್ಕ ಕುರುಂಬುಡೇಲು ನಿವಾಸಿ ವನಿತಾ ಯಾನೆ ರೇವತಿ(30) ಮೃತ ಯುವತಿ.ವನಿತಾರವರು ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದವರು ಅನಾರೋಗ್ಯ ಸಮಸ್ಯೆ ಕಾಡಿದ ಹಿನ್ನಲೆಯಲ್ಲಿ ಒಂದು ತಿಂಗಳ ಹಿಂದೆ ಮನೆಗೆ ಬಂದಿದ್ದರು. 8 ರಂದು ಮುಂಜಾನೆ ಮನೆಯ ಪಕ್ಕಾಸಿಗೆ ನೇಣು ಬಿಗಿದು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Exit mobile version