ಮಂಗಳೂರು: ಇನ್ಸ್ಟಾಗ್ರಾಂ ಮೂಲಕ ಪರಿಚಯವಾದ ಯುವತಿಗೆ ವಂಚಿಸಿ ದೈಹಿಕ ಸಂಪರ್ಕ ಬೆಳೆಸಿ ಮೋಸ ಮಾಡಿರುವ ಘಟನೆ ನಡೆದಿದೆ. ಕಡಬ ಮೂಲದ ಅನೀಶ್ ರೆಹಮಾನ್ ನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಇನ್ಸ್ಟಾಗ್ರಾಂ ಮೂಲಕ ಅನೀಶ್ ಗೆ ಯುವತಿ ಪರಿಚಯವಾಗಿದ್ದು, ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ನಿರಂತರ ದೈಹಿಕ ಸಂಪರ್ಕ ನಡೆಸಿದ್ದ ಎನ್ನಲಾಗಿದೆ. ಹೊಟೇಲ್ ನಲ್ಲಿ ರೂಂ ಮಾಡಿ ನಿರಂತರ 20 ದಿನಗಳ ಕಾಲ ದೈಹಿಕ ಸಂಪರ್ಕ ಮಾಡಿದ್ದ ಎನ್ನಲಾಗಿದೆ. ಆದರೆ ಆತನಿಗೆ ಮದುವೆಯಾಗಿರುವ ವಿಚಾರ ತಿಳಿದ ಯುವತಿ ಪೊಲೀಸ್ ದೂರು ನೀಡಿದ್ದರು.
ಐಪಿಸಿ 506, 417 ಹಾಗೂ 376 ರಡಿ ಕೇಸು ದಾಖಲಿಸಿ ರೆಹಮಾನ್ ನನ್ನು ಅರೆಸ್ಟ್ ಮಾಡಲಾಗಿದೆ. ಕಾವೂರು ಠಾಣಾ ವ್ಯಾಪ್ತಿಯಲ್ಲೂ ಗಾಂಜಾ ಸೇವನೆ ಕೇಸ್ ನಲ್ಲಿ ಬಂಧಿತನಾಗಿದ್ದ ರೆಹಮಾನ್.