Site icon newsroomkannada.com

24 ವರ್ಷದ ನವವಿವಾಹಿತೆ ಅನುಮಾನಾಸ್ಪದ ಸಾವು, ಗಂಡನ ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಮಗಳನ್ನ ಕೊಲೆ ಮಾಡಿ ನೇಣು ಹಾಕಿದ್ದಾನೆ ಎಂದ ಪೋಷಕರು

ಹಾಸನ: ನವವಿವಾಹಿತೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ನಾಗಯ್ಯನಕೊಪ್ಪಲು ಗ್ರಾಮದಲ್ಲಿ ನಡೆದಿದೆ.

24 ವರ್ಷದ ಸುರಭಿ ಮೃತ ದುರ್ದೈವಿಯಾಗಿದ್ದು, ಪತಿಯೇ ಕೊಲೆ ಮಾಡಿದ್ದಾನೆಂದು ಮೃತ ಪೋಷಕರು ಆರೋಪ ಮಾಡಿದ್ದಾರೆ.

ಹುಣಸೂರಿನ ಮೃತ ಯುವತಿಯನ್ನು ಮೂರು ವರ್ಷದ ಹಿಂದೆ ನಾಗಯ್ಯನಕೊಪ್ಪಲು ಗ್ರಾಮದ ದರ್ಶನ್ ಜೊತೆ ವಿವಾಹ ಮಾಡಿಕೊಟ್ಟಿದ್ದರು. ಆದರೆ ನಿನ್ನೆ ಗಂಡನ ಮನೆಯಲ್ಲಿ ಸುರಭಿ ಏಕಾಏಕಿ ಸಾವನ್ನಪ್ಪಿದ್ದಾಳೆ. ನಿಮ್ಮ ಮಗಳು ಲೋ ಬಿಪಿಯಾಗಿ ಸಾವನ್ನಪ್ಪಿದ್ದಾಳೆ ಎಂದು ಪತಿ ದರ್ಶನ್, ಸುರಭಿ ಪೋಷಕರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾನೆ.

ಸದ್ಯ ಸುರಭಿ ಪೋಷಕರು ಅಳಿಯನೇ ಮಗಳನ್ನು ಕೊಲೆ ಮಾಡಿದ್ದಾನೆ. ದರ್ಶನ್ ಬೇರೆ ಯುವತಿ ಜೊತೆ ಅಕ್ರಮ ಸಂಬಂಧವಿತ್ತು ಇದನ್ನು ಪ್ರಶ್ನಿಸುತ್ತಿದ್ದ ಸುರಭಿಯನ್ನು ನೇಣು ಬಿಗಿದು ಕೊಲೆ ಮಾಡಿ ನಾಟವಾಡುತ್ತಿದ್ದಾನೆ ಎಂದು ಆರೋಪ ಮಾಡಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಶ್ರವಣಬೆಳಗೊಳ ಆಸ್ಪತ್ರೆಗೆ ಸುರಭಿ ಮೃತದೇಹವನ್ನು ಪೊಲೀಸರು ಶಿಫ್ಟ್ ಮಾಡಿದ್ದಾರೆ. ಸ್ಥಳಕ್ಕೆ ಶ್ರವಣಬೆಳಗೊಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ರವಣಬೆಳಗೊಳ ಪೊಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲು ಮಾಡಲಾಗಿದೆ

Exit mobile version