ಬಂಟ್ವಾಳ: ಚಲಿಸುತ್ತಿದ್ದ ಬಸ್ನಿಂದ ರಸ್ತೆಗೆ ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ನಿನ್ನಿಕಲ್ ನಿವಾಸಿ ರಾಧ(66) ಮೃತ ಮಹಿಳೆ. ಮಗುವನ್ನು ಹಿಡಿದುಕೊಂಡು ಬಸ್ ಹತ್ತಿದ ಮಹಿಳೆಗೆ ಸೀಟು ಬಿಟ್ಟುಕೊಟ್ಟಿದ್ದ ಮೃತ ರಾಧಾ ಅವರು, ಬಸ್ನ ಸರಳು ಹಿಡಿಯುವ ವೇಳೆ ಕೈ ಜಾರಿ ಬಸ್ನಿಂದ ಹೊರಗೆ ಬಿದ್ದು ಗಾಯವಾಗಿತ್ತು, ಕೂಡಲೇ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ, ನಿನ್ನೆ ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ. ಮಹಿಳೆ ಬಸ್ನಿಂದ ಹೊರಗೆಬಿದ್ದ ಭಯಾನಕ ದೃಶ್ಯ ಬಸ್ಗೆ ಅಳವಡಿಸಿದ್ದ ಸಿ.ಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಕುರಿತು ಬಸ್ ಚಾಲಕ ಹಾಗೂ ನಿರ್ವಾಹಕನ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.