main logo

ರಾತ್ರಿ ಊಟ ಮಾಡಿ ಮಲಗಿದ್ದ ಯುವತಿ ಬೆಳಗ್ಗೆ ಎದ್ದೇಳಲೇ ಇಲ್ಲ

ರಾತ್ರಿ ಊಟ ಮಾಡಿ ಮಲಗಿದ್ದ ಯುವತಿ ಬೆಳಗ್ಗೆ ಎದ್ದೇಳಲೇ ಇಲ್ಲ

ಬಂಟ್ವಾಳ: ರಾತ್ರಿ ಊಟ ಮಾಡಿ ನಿದ್ದೆಗೆ ಜಾರಿದ್ದ ಯುವತಿ ಬೆಳಗ್ಗಿನ ವೇಳೆಯಲ್ಲಿ ಮಲಗಿದ್ದಲ್ಲಿಂದ ಎದ್ದೇಳದೆ ತಟಸ್ಥರಾದ ಘಟನೆ ಬಂಟ್ವಾಳದ ವಗ್ಗ ಸಮೀಪದ ಮದ್ವ ಎಂಬಲ್ಲಿ ನಡೆದಿದೆ.ಕಾವಳಮೂಡುರು ಗ್ರಾಮದ ಪುಳಿಮಜಲು ನಿವಾಸಿ ರಾಜ ಅವರ ಪುತ್ರಿ ಮಿತ್ರ ಶೆಟ್ಟಿ (23)ಯುವತಿ.

ಊಟ ಮಾಡಿ ಮಲಗಿದ ಯುವತಿ ಬೆಳಿಗ್ಗೆ ನೋಡುವಾಗ ಮಲಗಿದ ಸ್ಥಿತಿಯಲ್ಲಿಯೇ ಇದ್ದರು. ಘಟನೆಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ. ತಂದೆ ಮತ್ತು ಅಣ್ಣ ಇಬ್ಬರು ಬೆಂಗಳೂರಿನಲ್ಲಿ ಕೆಲಸದಲ್ಲಿರುವ ಕಾರಣ ತಾಯಿ ಮತ್ತು ಮಗಳು ಪ್ರಸ್ತುತ ಕಾವಳಪಡೂರು ಗ್ರಾಮದ ಮದ್ವ ಕಂಬಲಡ್ಡ ದೊಡ್ಡಮ್ಮನ ಮನೆಯಲ್ಲಿ ವಾಸವಾಗಿದ್ದರೆಂದು ತಿಳಿದು ಬಂದಿದೆ.

ರಾತ್ರಿ ಊಟ ಮಾಡಿ ಮಲಗಿದ್ದವಳು ಬೆಳಿಗ್ಗೆ ಎದ್ದು ನೋಡುವಾಗ ಎದ್ದೇಳ್ತಾ ಇಲ್ಲ, ಮಾತನಾಡುತ್ತಿಲ್ಲ ಎಂದು ಆಸ್ಪತ್ರೆಗೆ ಹೋಗಿ ಪರೀಕ್ಷೆ ಮಾಡಿದಾಗ ಈ ವಿಷಯವನ್ನು ವೈದ್ಯರು ತಿಳಿಸಿದ್ದಾರೆ.ಆರಂಭದಲ್ಲಿ ಹೃದಯಾಘಾತವಾಗಿರಬಹುದೆಂದು ಹೇಳಲಾಗುತ್ತಿತ್ತು. ಆದರೆ ಬ್ರೈನ್ ಹ್ಯಾಮರೇಜ್ ನಿಂದಲೂ ಈ ಘಟನೆ ಆಗಿರಬಹುದು ಎಂಬ ಸಂಶಯವಿದ್ದು, ವೈದ್ಯರು ಪರೀಕ್ಷೆಯ ವರದಿಯನ್ನು ನೀಡಿದ ಬಳಿವಷ್ಟೇ ಸ್ಪಷ್ಟವಾದ ಕಾರಣ ಸಿಗಬಹುದು.

ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕ್ರಿಯಾಶೀಲೆ ಯುವತಿ ಓಂಕಾರ ಫ್ರೆಂಡ್ಸ್ (ರಿ) ಮದ್ವ ಇದರ ಮಹಿಳಾ ಘಟಕದ ಸದಸ್ಯೆಯಾಗಿರುವ ಮಿತ್ರ ಶೆಟ್ಟಿ ಬಿಸಿರೋಡಿನ ವಕೀಲರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದಳು. ಅತ್ಯಂತ ಕ್ರಿಯಾಶೀಲ ಯುವತಿಯಾಗಿದ್ದು ಸಾಮಾಜಿಕವಾಗಿ ಗುರುತಿಸಿಕೊಂಡು ಹೆಸರು ಪಡೆದಿದ್ದಳು.

Related Articles

Leave a Reply

Your email address will not be published. Required fields are marked *

error: Content is protected !!