main logo

ಉಡುಪಿ-ದ.ಕ. ಸೇರಿ ಏಳು ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’ ಘೋಷಣೆ

ಉಡುಪಿ-ದ.ಕ. ಸೇರಿ ಏಳು ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು: ಬರಗಾಲ ಛಾಯೆಯಿಂದ ಇಡೀ ಕರ್ನಾಟಕವೇ ನಲುಗಿ ಹೋಗಿದೆ. ಮಳೆಯಿಲ್ಲದೆ ಬೆಳೆಗಳು ಒಣಗಿಹೋಗಿದ್ದು, ರೈತ ತಲೆ ಮೇಲೆ ಕೈಹೊತ್ತು ಕುಳಿತು ಕೊಳ್ಳುವ ಸ್ಥಿತಿ ಎದುರಾಗಿದೆ.

ಈ ನಡುವೆ ಹವಾಮಾನ ಇಲಾಖೆ ರಾಜ್ಯದ ಜನರಿಗೆ ಶುಭ ಸುದ್ದಿಯೊಂದನ್ನು ನೀಡಿದೆ.

ಕರ್ನಾಟಕದ 7 ಜಿಲ್ಲೆಗಳಲ್ಲಿ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ಚಿಕ್ಕಮಗಳೂರು, ಕೊಡಗಿನಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಗಳ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ಇದೇ ಸಂದರ್ಭದಲ್ಲಿ ನೀಡಿದೆ.

Related Articles

Leave a Reply

Your email address will not be published. Required fields are marked *

error: Content is protected !!
ನ್ಯೂಸ್‌ರೂಮ್‌ ವಾಟ್ಸ್ಅಪ್ ಗ್ರೂಪ್ ಗೆ ಸೇರಿ