ಬೆಳ್ತಂಗಡಿ: ಜಿಲ್ಲಾ ಮಟ್ಟದಲ್ಲಿ ಕಬಡ್ಡಿ ತಂಡವನ್ನು ಪ್ರತಿನಿಧಿಸಿದ್ದ ಯುವಕನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಪುದುವೆಟ್ಟಿನಲ್ಲಿ ನಡೆದಿದೆ.
ಉಜಿರೆಯ ‘ಸಾನಿಧ್ಯ’ ಖಾಸಗಿ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದ 24 ವರ್ಷದ ಸ್ವರಾಜ್ ಎಂಬವರೇ ಈ ರೀತಿ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾರೆ.
ಸ್ವರಾಜ್ ಅವರು ತನ್ನ ಮನೆಯ ಸ್ನಾನದ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪ್ರತಿಭಾವಂತ ಕಬಡ್ಡಿ ಪಟುವಾಗಿದ್ದ ಸ್ವರಾಜ್ ಅವರು ಈ ಕ್ರೀಡೆಯಲ್ಲಿ ಜಿಲ್ಲಾಮಟ್ಟವನ್ನು ಪ್ರತಿನಿಧಿಸಿದ್ದರು.
ಈ ಅತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿದುಬರಬೇಕಾಗಿದ್ದು, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೆಚ್ಚಿನ ಮಾಹಿತಿಗಳನ್ನು ನಿರೀಕ್ಷಿಸಲಾಗುತ್ತಿದೆ.