ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ 2023-24ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಆರಂಭಿಸಿದ್ದು ಆರಂಭಿಸಿದ್ದಾರೆ. ರೈತರಿಗೆ ಶೂನ್ಯ ಬಡಿದರದ ಸಾಲ ಮಿತಿಯನ್ನ 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ಮಾಡಲಾಗಿದೆ. ಜೊತೆಗೆ ಮಧ್ಯಮಾವಧಿ, ದೀರ್ಘಾವಧಿ ಸಾಲ ಮಿತಿಯನ್ನ 10 ಲಕ್ಷದಿಂದ 15 ಲಕ್ಷಕ್ಕೆ ಏರಿಸಲಾಗಿದ್ದು, ಗುಡ್ಡಗಾಡು ಪ್ರದೇಶದ ರೈತರಗೆ ಪಿಕ್ ವ್ಯಾನ್ ಖರೀದಿಗೆ 7 ಲಕ್ಷದವರೆಗೆ ಸಾಲ ನೀಡಲಾಗುವುದು ಎಂದು ವಿವರಿಸಿದರು.
ಎತ್ತಿನ ಹೊಳೆ ಯೋಜನೆಗೆ ಪರಿಷ್ಕೃತ ಮೊತ್ತ 22,252 ಕೋಟಿ ಮೀಸಲಿಡಲಾಗಿದೆ. ಇನ್ನು ಮೇಕೆದಾಟು ಯೋಜನೆಗೆ ಭೂಸ್ವಾಧಿನ ಪ್ರಕ್ರಿಯೆಗೆ ಚಾಲನೆ ನೀಡಲು ನಿರ್ಧಾರ ಮಾಡಲಾಗಿದೆ.